ನಾಳೆ ಮಂಗಳೂರು ಪುರಭವನದಲ್ಲಿ ಮದರ್ ತೆರೆಸಾ ಸಂಸ್ಮರಣೆ ಪ್ರಯುಕ್ತ ವಿಚಾರ ಸಂಕಿರಣ
ಮಂಗಳೂರು: ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಮಂಗಳೂರಿನ ಟೌನ್‍ಹಾಲ್‍ನಲ್ಲಿ ಸಪ್ಟೆಂಬರ್ 21ರಂದು ಗುರುವಾರ ‘ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು’ ಎಂಬ ತತ್ವದಡಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 9.30ಕ್ಕೆ ಪ್ರೀತಿಯ ಸಿಂಚನ ಸೌಹಾರ್ದ ಗಾಯನದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಲಿದೆ. 10 ಗಂಟೆಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು ಖ್ಯಾತ ಸಾಹಿತಿ, ವಿಮರ್ಶಕ ಪ್ರೊ. ಕೆ. ಫಣಿರಾಜ್ ಉದ್ಘಾಟಿಸಲಿದ್ದಾರೆ. ಜನಪದ ವಿದ್ವಾಂಸ, ನಿವೃತ್ತ ಎನ್‍ಎಸ್‍ಎಸ್ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು ವಿಚಾರ ಮಂಡನೆ ಮಾಡಲಿರುವರು. ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಪ್ರತಿಕ್ರಿಯೆ ನೀಡಲಿದ್ದಾರೆ. ವೇದಿಕೆಯ ಮುಂದಾಳು ರೊಯ್ ಕ್ಯಾಸ್ಟೆಲಿನೊ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನರಿಗಾಗಿ ಏರ್ಪಡಿಸಲಾಗಿದೆ. ಪ್ರಸ್ತುತ ಕಾಲದಲ್ಲಿ ಮಾನವೀಯತೆ ಮತ್ತು ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರುವ ಈ ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ಆಯೋಜಕರು ಕರೆ ನೀಡಿದ್ದಾರೆ.
ನಮ್ಮ ಕನ್ನಡ ವಾಟ್ಸಪ್ ಗ್ರೂಪ್‍ಗೆ ಭರ್ತಿ ಆಗಿ: https://chat.whatsapp.com/CxzVPIf7DAIBDtNI53fgme
Send your Feedback to: budkuloepaper@gmail.com